Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:24 - ಕನ್ನಡ ಸಮಕಾಲಿಕ ಅನುವಾದ

24 ಅವರ ಪಿತೃಗಳ ಮನೆಯಲ್ಲಿರುವ ಯಜಮಾನರು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್. ಇವರು ಪರಾಕ್ರಮಶಾಲಿಗಳಾಗಿಯೂ, ಹೆಸರುಗೊಂಡವರಾಗಿಯೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರಾಗಿಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇವರ ಗೋತ್ರಗಳ ಪ್ರಧಾನ ಪುರುಷರು ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್. ಇವರು ರಣವೀರರೂ ಪ್ರಖ್ಯಾತಿ ಹೊಂದಿದವರು ಗೋತ್ರಪ್ರಧಾನರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರ ಗೋತ್ರಗಳ ಮುಖ್ಯಸ್ಥರು: ಏಫೆರ್, ಇಷೀ, ಎಲೀಯೆಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್ ಎಂಬವರು. ಇವರೆಲ್ಲರೂ ಪ್ರಖ್ಯಾತ ಸೈನಿಕರೂ ತಮ್ಮ ಗೋತ್ರಗಳ ನಾಯಕರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರ ಗೋತ್ರಗಳ ಪ್ರಧಾನ ಪುರುಷರು - ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ. ಹೋದವ್ಯ, ಯೆಹ್ತೀಯೇಲ್. ಇವರು ರಣವೀರರೂ ಹೆಸರುಗೊಂಡವರೂ ಗೋತ್ರ ಪ್ರಧಾನರೂ ಆಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮನಸ್ಸೆಯ ಅರ್ಧಕುಲದ ಅಧಿಪತಿಗಳು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್, ಇವರೆಲ್ಲಾ ಬಲಾಢ್ಯರೂ ಧೈರ್ಯಶಾಲಿಗಳೂ ಆದ ವೀರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:24
6 ತಿಳಿವುಗಳ ಹೋಲಿಕೆ  

ಹೆಸರು ಹೆಸರಾಗಿ ಬರೆಯಲಾದ ಇವರು ತಮ್ಮ ಕುಟುಂಬಗಳಲ್ಲಿ ನಾಯಕರಾಗಿದ್ದರು. ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.


ಅಪ್ಪಯಿಮ್ ಇವನ ಪುತ್ರರು: ಇಷ್ಷೀಯು; ಇಷ್ಷೀಯನ ಮಗನು ಶೇಷಾನನು; ಶೇಷಾನನ ಮಗನು; ಅಹ್ಲಾಯಿಯನು;


ಮನಸ್ಸೆಯ ಅರ್ಧ ಗೋತ್ರದ ಜನರು ದೇಶದಲ್ಲಿ ವಾಸಮಾಡಿ, ಬಾಷಾನ್ ಮೊದಲುಗೊಂಡು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಬೆಟ್ಟದವರೆಗೂ ಹಬ್ಬಿಕೊಂಡರು.


ಆದರೆ ಅವರು ತಮ್ಮ ಪಿತೃಗಳ ದೇವರಿಗೆ ದ್ರೋಹಿಗಳಾಗಿದ್ದರು. ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.


ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು.


ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು