1 ಪೂರ್ವಕಾಲ ವೃತ್ತಾಂತ 5:26 - ಕನ್ನಡ ಸಮಕಾಲಿಕ ಅನುವಾದ26 ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ . ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು. ಅಧ್ಯಾಯವನ್ನು ನೋಡಿ |