Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:14 - ಕನ್ನಡ ಸಮಕಾಲಿಕ ಅನುವಾದ

14 ಮನಸ್ಸೆಯ ವಂಶಜರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಸ್ರೀಯೇಲ್ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಾಮ್ಯ ಉಪಪತ್ನಿಯಿಂದ ಮನಸ್ಸೆಗೆ ಅಷ್ರಿಯೇಲ್, ಮಾಕೀರ ಎಂಬಿಬ್ಬರು ಮಕ್ಕಳಿದ್ದರು. ಮಾಕೀರ ಗಿಲ್ಯಾದನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮನಸ್ಸೆಯ ಸಂತಾನದವರು - ಮನಸ್ಸೆಯ ಅರಾಮ್ಯಳಾದ ಉಪಪತ್ನಿಯು ಅವನಿಗೆ ಅಷ್ರೀಯೇಲನನ್ನೂ ಮಾಕೀರನನ್ನೂ ಹೆತ್ತಳು; ಮಾಕೀರನು ಗಿಲ್ಯಾದನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮನಸ್ಸೆಯ ಸಂತತಿಯವರು ಯಾರೆಂದರೆ: ಮನಸ್ಸೆ ಮತ್ತು ಅವನ ಅರಾಮ್ಯದ ದಾಸಿಯಲ್ಲಿ ಹುಟ್ಟಿದ ಮಗ ಅಷ್ರೀಯೇಲ್; ಅವರಿಗೆ ಮಾಕೀರ್ ಎಂಬ ಇನ್ನೊಬ್ಬ ಮಗನಿದ್ದನು. ಇವನು ಗಿಲ್ಯಾದನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:14
13 ತಿಳಿವುಗಳ ಹೋಲಿಕೆ  

ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು.


ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು.


ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು.


ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ನಫ್ತಾಲಿಯ ಪುತ್ರರು: ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಪುತ್ರರು.


ಆದರೆ ಈ ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸಹೋದರಿಯಾದ ಮಾಕಳನ್ನು ಹೆಂಡತಿಯಾಗಿ ತೆಗೆದುಕೊಂಡನು. ಅವನ ಮೊಮ್ಮಗನ ಹೆಸರು ಚೆಲೊಫಾದನು; ಈ ಚೆಲೋಫಾದನಿಗೆ ಪುತ್ರಿಯರು ಮಾತ್ರ ಇದ್ದರು.


ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು