Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:21 - ಕನ್ನಡ ಸಮಕಾಲಿಕ ಅನುವಾದ

21 ಅವನ ಮಗನು ಜಾಬಾದ್; ಅವನ ಮಗನು ಶೂತೆಲಹ, ಏಜೆರ್, ಎಲಿಯಾದ್. ಆ ದೇಶದಲ್ಲಿ ಹುಟ್ಟಿದ ಗತ್‌ನವರು ಇವರ ಪಶುಗಳನ್ನು ಹಿಡಿದುಕೊಳ್ಳಲು ಇಳಿದು ಬಂದಾಗ, ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜಾಬಾದ್, ಶೂತೆಲಹ ಎಂಬವರು. ಶೂತೆಲಹನಲ್ಲದೆ ಎಫ್ರಯಿಮನಿಗೆ ಎಜೆರ್, ಎಲ್ಲಾದ್ ಎಂಬಿಬ್ಬರು ಮಕ್ಕಳಿದ್ದರು. ಇವರು ಗತ್‍ನ ಮೂಲನಿವಾಸಿಗಳ ದನಗಳನ್ನು ಕದಿಯಲು ಪ್ರಯತ್ನಿಸಿದಾಗ ಕೊಲೆಗೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವನ ಮಗನು ಜಾಬಾದ್; ಇವನ ಮಕ್ಕಳು - ಶೂತೆಲಹ, ಎಜೆರ್, ಎಲ್ಲಾದ್ ಎಂಬವರು. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದದರಿಂದ ಆ ದೇಶದ ಮೂಲನಿವಾಸಿಗಳು ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:21
6 ತಿಳಿವುಗಳ ಹೋಲಿಕೆ  

ಎಫ್ರಾಯೀಮನ ವಂಶಜರು: ಶೂತೆಲಹ, ಅವನ ಮಗನು ಬೆರೆದ್; ಅವನ ಮಗನು ತಹಾತ್; ಅವನ ಮಗನು ಎಲ್ಲಾದ, ಅವನ ಮಗನು ತಹತ್;


ಅವರ ತಂದೆಯಾದ ಎಫ್ರಾಯೀಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ, ಅವನ ಸಹೋದರರು ಅವನನ್ನು ಆದರಿಸಲು ಬಂದರು.


ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು.


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು