Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:24 - ಕನ್ನಡ ಸಮಕಾಲಿಕ ಅನುವಾದ

24 ಇವನ ಪುತ್ರಿಯ ಹೆಸರು ಶೇರಳು. ಇವಳು ಕೆಳಗಿನ ಬೇತ್ ಹೋರೋನ್, ಮೇಲಿನ ಬೇತ್ ಹೋರೋನ್ ಮತ್ತು ಉಜ್ಜೇನ್ ಶೇರವನ್ನೂ ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಎಫ್ರಯಿಮನಿಗೆ ಶೇರ ಎಂಬ ಮಗಳು ಇದ್ದಳು. ಈಕೆ ಮೇಲಿನ ಹಾಗು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನೂ ಉಜ್ಜೇನ್ ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಶೇರ ಎಂಬವಳು ಅವನ ಮಗಳು; ಈಕೆಯು ಮೇಲಣ ಮತ್ತು ಕೆಳಗಣ ಬೇತ್‍ಹೋರೋನ್ ಎಂಬ ಪಟ್ಟಣಗಳನ್ನೂ ಉಜ್ಜೇನ್‍ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಎಫ್ರಾಯೀಮನ ಮಗಳ ಹೆಸರು ಶೇರ. ಅವಳು ಕೆಳಗಿನ ಬೇತ್‌ಹೋರೋನ್ ಮತ್ತು ಮೇಲಿನ ಬೇತ್‌ಹೋರೋನ್ ಮತ್ತು ಕೆಳಗಿನ ಉಜ್ಜೇನ್‌ಶೇರ ಮತ್ತು ಮೇಲಿನ ಉಜ್ಜೇನ್‌ಶೇರ ಪಟ್ಟಣಗಳನ್ನು ಕಟ್ಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:24
7 ತಿಳಿವುಗಳ ಹೋಲಿಕೆ  

ಅವರ ಕುಟುಂಬಗಳ ಪ್ರಕಾರ ಎಫ್ರಾಯೀಮ್ ಗೋತ್ರದ ಪ್ರದೇಶ ಹೀಗಿತ್ತು: ಪೂರ್ವದಿಕ್ಕಿನ ಅಟಾರೋತ್ ಅದ್ದಾರಿನಿಂದ ಪ್ರಾರಂಭಿಸಿ, ಮೇಲಿನ ಬೇತ್ ಹೋರೋನಿನವರೆಗೂ ಇತ್ತು.


ಪಶ್ಚಿಮಕ್ಕೆ ಯಫ್ಲೇಟ್ಯರ ಮೇರೆಗೂ ಕೆಳಗಡೆಯಾದ ಬೇತ್ ಹೋರೋನ್ ಮೇರೆಯವರೆಗೂ ಅಲ್ಲಿಂದ ಗೆಜೆರಿನವರೆಗೂ ಹೋಗಿ ಮೆಡಿಟೆರಿಯನ್ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


ಇವುಗಳಲ್ಲದೆ, ಮೇಲಿನ ಬೇತ್ ಹೋರೋನ್ ಮತ್ತು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನು ಪುನಃ ನಿರ್ಮಿಸಿದನು. ಈ ಪಟ್ಟಣಗಳು ಬಲವಾದ ಗೋಡೆಗಳು, ಬಾಗಿಲುಗಳು ಮತ್ತು ಅಗುಳಿಗಳು ಉಳ್ಳ ಕೋಟೆ ಪಟ್ಟಣಗಳಾಗಿ ಸೊಲೊಮೋನನು ಕಟ್ಟಿಸಿದನು.


ಹೀಗೆಯೇ ಸೊಲೊಮೋನನು ಗೆಜೆರನ್ನೂ, ಕೆಳಗಿನ ಬೇತ್ ಹೋರೋನನ್ನೂ,


ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.


ಅವನು ತನ್ನ ಹೆಂಡತಿಯ ಬಳಿಗೆ ಸೇರಿದಾಗ, ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯ ಎಂದು ಹೆಸರಿಟ್ಟನು.


ಇವರ ಪುತ್ರರು: ರೆಫಹನ ಮಗನು ರೆಷೆಫನು, ರೆಷೆಫನ ಮಗನು ತೆಲಹನು, ಅವನ ಮಗನು ತಹನನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು