1 ಪೂರ್ವಕಾಲ ವೃತ್ತಾಂತ 9:1 - ಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಲ್ಲಾ ಇಸ್ರಾಯೇಲ್ಯರು ವಂಶಾವಳಿಗಳಲ್ಲಿ ಲಿಖಿತರಾದರು; ಅವರ ಹೆಸರುಗಳು ಇಸ್ರಾಯೇಲ್ಯರ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ. ಯೆಹೂದ್ಯರು ದೇವದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು. ಅಧ್ಯಾಯವನ್ನು ನೋಡಿ |