1 ಪೂರ್ವಕಾಲ ವೃತ್ತಾಂತ 9:22 - ಕನ್ನಡ ಸಮಕಾಲಿಕ ಅನುವಾದ22 ಬಾಗಿಲುಗಳಲ್ಲಿ ದ್ವಾರಪಾಲಕರಾಗಿರಲು ಆಯ್ಕೆಯಾದ ಇವರೆಲ್ಲರು 212 ಮಂದಿಯಾಗಿದ್ದರು. ಇವರು ಹೆಸರುಗಳು ಅವರವರ ಗ್ರಾಮಗಳಲ್ಲಿ ಅವರ ವಂಶಾವಳಿಯ ಪ್ರಕಾರ ಲಿಖಿತವಾಗಿದ್ದವು. ಇವರು ನಂಬಿಗಸ್ತರಾದ್ದರಿಂದ ದಾವೀದನೂ, ದರ್ಶಿಯಾದ ಸಮುಯೇಲನೂ ಇವರನ್ನು ಜವಾಬ್ದಾರಿಯ ಸ್ಥಾನಗಳಿಗೆ ನೇಮಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಒಟ್ಟು ಇನ್ನೂರ ಹನ್ನೆರಡು ಮಂದಿ, ದ್ವಾರಪಾಲಕರಾಗಿ ನೇಮಕಗೊಂಡಿದ್ದರು. ಅವರು ನೆಲೆಸಿದ್ದ ಗ್ರಾಮಗಳಲ್ಲಿ ಅವರ ಹೆಸರುಗಳು ದಾಖಲಾಗಿದ್ದವು. ಈ ಜವಾಬ್ದಾರಿಯ ಸ್ಥಾನಗಳಿಗೆ ಅವರ ಪೂರ್ವಜರನ್ನು ನೇಮಿಸಿದವರು ಅರಸ ದಾವೀದನು ಮತ್ತು ಪ್ರವಾದಿ ಸಮುವೇಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಮಂದಿ; ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಗಳಲ್ಲಿ ಲಿಖಿತವಾಗಿದ್ದವು. ದಾವೀದನೂ ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೋಗಕ್ಕೆ ನೇವಿುಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು. ಅಧ್ಯಾಯವನ್ನು ನೋಡಿ |
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.