Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:3 - ಕನ್ನಡ ಸಮಕಾಲಿಕ ಅನುವಾದ

3 ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ, ಬೆನ್ಯಾಮೀನನ ಮಕ್ಕಳೂ, ಎಫ್ರಾಯೀಮ್, ಮನಸ್ಸೆ ಎಂಬವರ ಮಕ್ಕಳು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಮತ್ತು ಮನಸ್ಸೆ ಗೋತ್ರಗಳವರು ಜೆರುಸಲೇಮಿನಲ್ಲಿ ವಾಸಮಾಡಲು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೂದ್ಯರು, ಬೆನ್ಯಾಮೀನ್ಯರು, ಎಫ್ರಾಯೀಮ್ಯರು, ಮನಸ್ಸೆಯರು ಇವರಲ್ಲಿ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದವರ ಪಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಮತ್ತು ಮನಸ್ಸೆ ಗೋತ್ರದವರಾದ ಇವರು ಜೆರುಸಲೇಮಿನಲ್ಲಿ ವಾಸವಾಗಿದ್ದರು. ಇವರು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:3
6 ತಿಳಿವುಗಳ ಹೋಲಿಕೆ  

ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.


ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.


ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ಯೆಹೂದನ ಮಗನಾದ ಪೆರೆಚನ ಮಕ್ಕಳಲ್ಲಿ ಒಬ್ಬನಾದ ಬಾನೀಯ ಮಗನಾದ ಇಮ್ರಿಯು, ಇವನ ಮಗನಾದ ಒಮ್ರಿ, ಇವನ ಮಗನು ಅಮ್ಮೀಹೂದನು, ಇವನ ಮಗನು ಉತೈ.


ಇವರೇ ಕುಟುಂಬಗಳಲ್ಲಿ ಯಜಮಾನರಾಗಿದ್ದು, ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು