Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:16 - ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು,” ಎಂದು ಪವಿತ್ರ ವೇದದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಮಿಯಾ ಬರೊ ತಸೆ ಮನುನ್ ತುಮಿಬಿ ಬರೆ ಹೊವ್ಕ್ ಪಾಜೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:16
6 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


“ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.


“ ‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಒಪ್ಪಂದ ಮಾಡಿಕೊಳ್ಳದ ಹೊರತು, ಇಬ್ಬರು ಜೊತೆಯಾಗಿ ನಡೆಯಲು ಸಾಧ್ಯವೋ?


ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು