1 ಪೇತ್ರನು 1:23 - ಕನ್ನಡ ಸಮಕಾಲಿಕ ಅನುವಾದ23 ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀವು ಪುನರ್ಜನ್ಮ ಹೊಂದಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ, ನಾಶವಾಗದ ಬೀಜದಿಂದಲೇ ಉಂಟಾದದ್ದು. ಅದು ದೇವರ ಸದಾಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನೀವು ಹೊಸದಾಗಿ ಹುಟ್ಟಿದವರಾಗಿದ್ದೀರಿ. ಈ ಹೊಸಜೀವವು ನಾಶವಾಗುವಂಥದ್ದರಿಂದ ಬರದೆ ನಾಶವಾಗದೆ ಇರುವಂಥದ್ದರಿಂದ ಬಂದದ್ದಾಗಿದೆ. ಸಜೀವವೂ ಶಾಶ್ವತವೂ ಆಗಿರುವ ದೇವರ ವಾಕ್ಯದ ಮೂಲಕ ನೀವು ಹೊಸದಾಗಿ ಹುಟ್ಟಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಕಶ್ಯಾಕ್ ಮಟ್ಲ್ಯಾರ್, ಶ್ವಾಸಾತ್ ಝಿತ್ತೊ ರಾತಲ್ಯಾ ದೆವಾಚ್ಯಾ ಗೊಸ್ಟಿಚ್ಯಾ ವೈನಾ ತುಮ್ಕಾ ನ್ಹವೊ ಜಲಮ್ ಗಾವ್ಲಾ, ಹ್ಯೊ ಜಲಮ್ ತುಮ್ಕಾ ನಾಸ್ ಹೊವ್ನ್ ಜಾತಲ್ಯಾ ಮಾನ್ಸಾಕ್ನಾ ನ್ಹಯ್, ನಾಸ್ ಹೊವ್ನ್ ಜಾಯ್ ನಸಲ್ಲ್ಯಾ ದೆವಾಕ್ನಾ ಗಾವ್ಲಾ. ಅಧ್ಯಾಯವನ್ನು ನೋಡಿ |