1 ಪೇತ್ರನು 2:12 - ಕನ್ನಡ ಸಮಕಾಲಿಕ ಅನುವಾದ12 ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ತುಮ್ಚಿ ಚಾಲ್ ಚಲ್ನ್ಯಾಕ್ ಬರಿ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್, ಖಲ್ಯಾ ಸಂಗ್ತಿಯಾಚ್ಯಾ ವಿಶಯಾತ್ ತೆನಿ ತುಮಿ ಚುಕಿದಾರ್ ಮನುನ್ ಮನ್ತಾತ್ ಅನಿ ತುಮ್ಚೆರ್ ಚುಕ್ ವಾವ್ತಾತ್ ತ್ಯಾಚ್ ವಿಶಯಾಂಚ್ಯಾ ವೈನಾ ತುಮ್ಚಿ ಬರಿ ಕಾಮಾ ಬಗುನ್ ತೆಚ್ಯಾ ಯೆನ್ಯಾಚ್ಯಾ ದಿಸಿ ದೆವಾಚಿ ತೆನಿ ಹೊಗ್ಳಾಪ್ ಕರ್ತಾತ್. ಅಧ್ಯಾಯವನ್ನು ನೋಡಿ |