1 ಪೇತ್ರನು 2:18 - ಕನ್ನಡ ಸಮಕಾಲಿಕ ಅನುವಾದ18 ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೆಲಸಗಾರರೇ, ನಿಮ್ಮ ಮೇಲಿನ ಅಧಿಕಾರಿಗಳಿಗೆ ಅಧೀನರಾಗಿರಿ. ಅವರಿಗೆ ಪೂರ್ಣಮರ್ಯಾದೆಯನ್ನು ತೋರಿಸಿರಿ. ದಯಾವಂತರೂ ಹಿತಚಿಂತಕರೂ ಆಗಿರುವ ಅಧಿಕಾರಿಗಳಿಗೆ ಮಾತ್ರವಲ್ಲ, ಕಠಿಣವಾಗಿ ವರ್ತಿಸುವವರಿಗೂ ವಿಧೇಯರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣಭಯದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಸೇವಕರೇ, ನಿಮ್ಮ ಒಡೆಯರ ಅಧಿಕಾರವನ್ನು ಒಪ್ಪಿಕೊಳ್ಳಿರಿ. ಇದನ್ನು ತುಂಬಾ ಗೌರವದಿಂದ ಮಾಡಿರಿ. ಒಳ್ಳೆಯವರಾದ ಮತ್ತು ದಯಾಪರರಾದ ಒಡೆಯರಿಗೆ ನೀವು ವಿಧೇಯರಾಗಿರಬೇಕು ಮತ್ತು ಕೆಟ್ಟವರಾದ ಒಡೆಯರಿಗೂ ವಿಧೇಯರಾಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಸೆವಕಾನು ತುಮ್ಚ್ಯಾ ಯಜಮಾನಾಕ್ನಿ ತುಮ್ಕಾಚ್ ತುಮಿ ಒಪ್ಸುನ್ ಘೆವಾ, ಅನಿ ಸಗ್ಳ್ಯಾ ರಿತಿನ್ ತೆಂಕಾ ಮಾನ್ ದಿವಾ, ಖಾಲಿ ಬರೆ ಕರ್ತಲ್ಯಾ ಯಜಮಾನಾಕ್ ಯೆವ್ಡೆಚ್ ನ್ಹಯ್ ಖಟುರ್ ಪಾನಾನ್ ಚಲ್ವುತಲ್ಯಾ ಯಜಮಾನಾಕ್‍ಬಿ ಮಾನ್ ದಿವಾ. ಅಧ್ಯಾಯವನ್ನು ನೋಡಿ |