Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:2 - ಕನ್ನಡ ಸಮಕಾಲಿಕ ಅನುವಾದ

2 ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೊಸದಾಗಿ ಹುಟ್ಟಿದ ಕೂಸುಗಳಂತಿರಿ. ನಿಮ್ಮ ಆತ್ಮವನ್ನು ಪೋಷಿಸುವಂಥ ಶುದ್ಧ ಹಾಲನ್ನು (ದೇವರ ವಾಕ್ಯವೆಂಬ) ಬಯಸಿರಿ. ನೀವು ಅದನ್ನು ಕುಡಿಯುವುದರಿಂದ ಬೆಳವಣಿಗೆ ಹೊಂದಿ ರಕ್ಷಿಸಲ್ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ಅತ್ತಾ ನ್ಹವಿನ್ ಉಪಾಜಲ್ಲ್ಯಾ ಬಾಳ್ಸ್ಯಾಂಚ್ಯಾ ಸಾರ್ಕೆ ಹೊವಾ ತುಮಿ ಕನ್ನಾಬಿ ಪವಿತ್ರ್ ಆತ್ಮಿಕ್ ದುದ್ದಾಕ್ ಆಸ್ಯಾ ಕರಾ ಅಸೆ ತೆ ಫಿಲ್ಲ್ಯಾ ವೈನಾ ತುಮಿ ವಾಡ್ತ್ಯಾನಾ ಅನಿ ಸುಟ್ಕಾ ಜೊಡುನ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:2
21 ತಿಳಿವುಗಳ ಹೋಲಿಕೆ  

ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


“ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಕ್ರಿಸ್ತನಲ್ಲಿ ಕಟ್ಟಡವೆಲ್ಲವೂ ಒಂದಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.


ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.


“ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.


ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು