Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:20 - ಕನ್ನಡ ಸಮಕಾಲಿಕ ಅನುವಾದ

20 ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನಿಮ್ಮ ತಪ್ಪಿಗಾಗಿ ನೀವು ದಂಡಿಸಲ್ಪಟ್ಟರೆ ಆ ದಂಡನೆಯನ್ನು ನೀವು ಅನುಭವಿಸಿದ್ದಕ್ಕೆ ನಿಮಗೇನೂ ಕೀರ್ತಿ ಬರುವುದಿಲ್ಲ. ಆದರೆ ನೀವು ಒಳ್ಳೆಯದನ್ನು ಮಾಡಿದ್ದರಿಂದ ಸಂಕಟಕ್ಕೆ ಒಳಗಾಗಿ ಅದನ್ನು ತಾಳ್ಮೆಯಿಂದ ಸಹಿಸಿಕೊಂಡರೆ ಅದು ದೇವರನ್ನು ಸಂತೋಷ ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕಶ್ಯಾಕ್ ಮಟ್ಲ್ಯಾರ್, ತಿಯಾ ಚುಕ್ ಕರುನ್ ತೆಚಿ ಶಿಕ್ಷಾ ಸೊಸಲ್ಲ್ಯಾರ್ ತುಕಾ ಕಾಯ್ ಗಾವಲ್ಲ್ಯಾಸಾರ್ಕೆ ಹೊಲೆ? ಖರೆ ತುಮಿ ಬರೆ ಕರುನ್ ತುಮ್ಕಾ ಕಸ್ಟ್ ಸೊಸ್ಲ್ಯಾರ್ ತೆಚ್ಯಾ ಸಾಟ್ನಿ ದೆವ್ ಆಶಿರ್ವಾದ್ ದಿತಾ, ತೊ ತರಾಸ್ ತಾಳ್ಮೆನ್ ಸೊಸುನ್ ಘೆಟಲೆ ಹೊಲ್ಯಾರ್ ತೆ ದೆವಾಕ್ ಉಮ್ಮೆದ್ ಅನಿ ಖುಶಿ ಹೊಯ್ ಸಾರ್ಕೆ ಕರ್ತಾ, ದೆವಾ ತುಮ್ಕಾ ಹೆಚ್ಯಾ ಸಾಟ್ನಿ ಆಶಿರ್ವಾದ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:20
14 ತಿಳಿವುಗಳ ಹೋಲಿಕೆ  

ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.


ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.


“ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ, ನಿಮಗೇನು ದೊಡ್ಡಸ್ತಿಕೆ ಬಂದೀತು? ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವರನ್ನೇ ಪ್ರೀತಿಸುತ್ತಾರೆ.


ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರೂ, ಸಾಕಷ್ಟು ವಸ್ತ್ರವಿಲ್ಲದವರೂ, ಕ್ರೂರವಾಗಿ ಪೆಟ್ಟಿಗೆ ಗುರಿಯಾಗುವವರೂ, ಮನೆಯಿಲ್ಲದವರೂ,


ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.


ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು,


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ.


ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಉತ್ತಮ ಕಾರ್ಯಗಳಲ್ಲಿ ನೀವು ಆಸಕ್ತರಾಗಿರುವುದು ಒಳ್ಳೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು