Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:21 - ಕನ್ನಡ ಸಮಕಾಲಿಕ ಅನುವಾದ

21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾ ಸಾಟ್ನಿ ಬಲ್ವುನ್ ಹೊಲಾ ಕ್ರಿಸ್ತಾನ್ ಬಿ ತುಮ್ಚ್ಯಾ ಸಾಟ್ನಿ ಕಸ್ಟ್ ಹೊವ್ನ್ ಹಾಯ್ ತೆಚ್ಯಾ ಸಾಟ್ನಿ ತುಮಿ ತೆಚ್ಯಾ ಸಾರ್ಕೆ ಚಲುಚೆ ಕ್ರಿಸ್ತಾಚ್ಯಾ ಸಾರ್ಕೆಚ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:21
30 ತಿಳಿವುಗಳ ಹೋಲಿಕೆ  

ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ಕೊಟ್ಟಿದ್ದೇನೆ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ನಾನು ಕ್ರಿಸ್ತ ಯೇಸುವನ್ನು ಅನುಸರಿಸುವಂತೆಯೇ, ನೀವೂ ನನ್ನನ್ನು ಅನುಸರಿಸಿರಿ.


ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.


ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:


ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.


ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನೀತಿಯು ದೇವರ ಮುಂದೆ ನಡೆದುಕೊಂಡು ಹೋಗಿ, ದೇವರಿಗೆ ಮಾರ್ಗ ಸಿದ್ಧಪಡಿಸುವುದು.


ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.


ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.


ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ.


ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,


ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು