Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:7 - ಕನ್ನಡ ಸಮಕಾಲಿಕ ಅನುವಾದ

7 ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ನಂಬುವವರಾದ ನಿಮಗೇ ಈ ಮಾನವುಂಟು. ನಂಬದೆಯಿರುವವರಿಗೋ - ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಂಬಿಕೆಯುಳ್ಳ ಜನರಾದ ನಿಮಗೆ ಆ ಕಲ್ಲು (ಯೇಸು) ಹೆಚ್ಚು ಬೆಲೆಯುಳ್ಳದ್ದು. ಆದರೆ ನಂಬದ ಜನರಿಗೆ ಆತನು ಇಂತೆಂದಿದ್ದಾನೆ: “ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಮನುನ್ ವಿಶ್ವಾಸ್ ಥವ್ತಲ್ಲ್ಯಾ ತುಮ್ಕಾ ತೊ ಎಕ್ ಕಿಮ್ತಿಚೊ ಗುಂಡೊ ಹೊವ್ನ್ ಹಾಯ್, ಖರೆ ವಿಶ್ವಾಸ್ ಕರಿನಸಲ್ಲ್ಯಾಂಚ್ಯಾ ಸಾಟ್ನಿ “ಬಾಂದ್ಪ್ಯಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊ ಮುಲ್ಲ್ಯಾತ್ಲೊ ಲೈ ಗರ್ಜೆಚೊ ಗುಂಡೊ ಹೊಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:7
26 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.


ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.


ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?


ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ.


ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ.


“ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.


ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.


ಆಗ ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಪವಿತ್ರ ವೇದದಲ್ಲಿ ಬರೆದಿರುವುದರ ಅರ್ಥ ಏನು?


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”


ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.


ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.


ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು