1 ಪೇತ್ರನು 2:9 - ಕನ್ನಡ ಸಮಕಾಲಿಕ ಅನುವಾದ9 ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ತುಮಿತರ್ಬಿ ದೆವಾನ್ ಎಚುನ್ ಕಾಡಲಿ ಲೊಕಾ, ಎಕ್ ರಾಜಾ ಸಾರ್ಕೆ ಜಿವನ್ ಕರ್ತಲ್ಯಾ ಯಾಜಕಾಂಚ್ಯಾ ಸಮಾಚ್ ಅನಿ ಎಕ್ ಪವಿತ್ರ್ ದೆಶ್, ಅನಿ ದೆವಾಚಿ ಸ್ವತಾಚಿ ಲೊಕಾ ಬಿ ಹೊವ್ನ್ ಹಾಸಿ, ಅಸೆ ತುಮಿ ಅಪ್ನಾಚ್ಯಾ ಮೊಟ್ಯಾ ಉಜ್ವಾಡ್ಯಾಚ್ಯಾ ವೈನಾ ತುಮ್ಕಾ ಕಾಳ್ಕಾತ್ನಾ ಭಾಯ್ರ್ ಕಾಡಲ್ಲ್ಯಾ ದೆವಾಚಿ ಅಜಾಪಾ ಹೊತಲಿ ಕಾಮಾ ಪರ್ಗಟ್ ಕರುಕ್ ಎಚುನ್ ಕಾಡಲ್ಲೆ ಹೊವ್ನ್ ಹಾಸಿ. ಅಧ್ಯಾಯವನ್ನು ನೋಡಿ |