Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:3 - ಕನ್ನಡ ಸಮಕಾಲಿಕ ಅನುವಾದ

3 ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕೇಶವಿನ್ಯಾಸ, ಚಿನ್ನಾಭರಣದ ತೊಡುಗ಼ೆ, ನಯನವುರಾದ ಉಡುಗೆ - ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಹೆಂಡತಿಯರಾದ ನಿಮ್ಮ ನಡತೆಯಿಂದಲೇ ಸನ್ಮಾರ್ಗಕ್ಕೆ ಬಂದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತಲೆಕೂದಲನ್ನು ಸುಂದರವಾಗಿ ಬಾಚಿಕೊಳ್ಳುವುದಾಗಲಿ ಬಂಗಾರದ ಒಡವೆಗಳಾಗಲಿ ಒಳ್ಳೆಯ ಬಟ್ಟೆಗಳಾಗಲಿ ನಿಮ್ಮ ಸೌಂದರ್ಯದ ಸಾಧನಗಳಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಟಕ್ಲ್ಯಾಚಿ ಕೆಸಾ ಬರೆ ಕರುನ್ ಉಕ್ಲುನ್ ಘೆತಲೆ ಹೊಂವ್ದಿತ್, ಸೊನ್ಯಾಚಿ ವಸ್ತಾ ನೆಸ್ತಲೆ ಬರೆ ಕಪ್ಡೆ ನೆಸ್ತಲೆ ಹೊಂವ್ದಿ ಹೆ ಸಗ್ಳೆ ಖಾಲಿ ದಾಕ್ವುಕ್ ಸಾಟ್ನಿ ಕರುಚೆ ನ್ಹಯ್, ಶಿಂಗಾರ್ ಹೊಯ್ ನಸ್ತಾನಾ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:3
22 ತಿಳಿವುಗಳ ಹೋಲಿಕೆ  

ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.


ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.


ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.


ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ಅವನು ಬೆಳ್ಳಿಯ ಒಡವೆ, ಬಂಗಾರದ ಒಡವೆ, ವಸ್ತ್ರಗಳನ್ನೂ ತಂದು, ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ, ಆಕೆಯ ತಾಯಿಗೂ ಅಮೂಲ್ಯವಾದ ಉಡುಗೊರೆಗಳನ್ನು ಕೊಟ್ಟನು.


“ನಾನು ಆಕೆಗೆ, ‘ನೀನು ಯಾರ ಮಗಳು?’ ಎಂದು ಕೇಳಿದೆನು. “ಅದಕ್ಕವಳು, ‘ನಾಹೋರನಿಗೆ ಮಿಲ್ಕಾಳು ಹೆತ್ತ ಮಗನಾದ ಬೆತೂಯೇಲನ ಮಗಳು,’ ಎಂದಳು. “ಆಗ ನಾನು ಆಕೆಗೆ ಮೂಗುತಿಯನ್ನೂ, ಆಕೆಯ ಕೈಗಳಿಗೆ ಬಳೆಗಳನ್ನೂ ಕೊಟ್ಟು,


ಒಂಟೆಗಳು ನೀರು ಕುಡಿದಾದ ಮೇಲೆ, ಆ ಮನುಷ್ಯನು ಅರ್ಧ ತೊಲೆಯ ತೂಕದ ಚಿನ್ನದ ಮೂಗುತಿಯನ್ನು, ಹತ್ತು ತೊಲೆ ತೂಕದ ಎರಡು ಬಳೆಗಳನ್ನು ಆಕೆಗೆ ಕೊಟ್ಟನು.


ರಾಜ ಪುತ್ರಿಯರು ನಿಮ್ಮ ಗೌರವ ಸ್ತ್ರೀಯರಲ್ಲಿ ಇದ್ದಾರೆ. ನಿಮ್ಮ ಬಲಗಡೆ ರಾಣಿಯು ಓಫೀರ್ ಬಂಗಾರವನ್ನು ಧರಿಸಿದ್ದಾಳೆ.


ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಸೇವೆಮಾಡುತ್ತಿದ್ದ ಸ್ತ್ರೀಯರಿಂದ ಕೂಡಿಸಿದ ಕಂಚಿನ ದರ್ಪಣಗಳಿಂದ ಕಂಚಿನಿಂದ ಬೋಗುಣಿಯನ್ನು ಅದರ ಪೀಠವನ್ನೂ ಮಾಡಿದರು.


ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಮತ್ತು ನಿಮ್ಮ ಪುತ್ರಪುತ್ರಿಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ,” ಎಂದನು.


“ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ.


ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.


ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.


ಆದರೆ ಪ್ರತಿ ಸ್ತ್ರೀಯು ತನ್ನ ಮನೆಯಲ್ಲಿ ಇಳಿದುಕೊಂಡಿರುವ ಸ್ತ್ರೀಯಿಂದಲೂ ನೆರೆಯವಳಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಮತ್ತು ವಸ್ತ್ರಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಪುತ್ರಪುತ್ರಿಯರ ಮೇಲೆ ಹಾಕಿರಿ. ಹೀಗೆ ನೀವು ಈಜಿಪ್ಟಿನವರನ್ನು ಸೂರೆಮಾಡುವಿರಿ,” ಎಂದರು.


ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.


ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು