Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:5 - ಕನ್ನಡ ಸಮಕಾಲಿಕ ಅನುವಾದ

5 ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಪತಿಯರಿಗೆ ಅಧೀನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರಾಚೀನಕಾಲದ ದೈವಭಕ್ತೆಯರಾದ ಸ್ತ್ರೀಯರು ಹೀಗೆಯೇ ಸಿಂಗರಿಸಿಕೊಂಡು ತಮ್ಮ ತಮ್ಮ ಪತಿಯರಿಗೆ ವಿಧೇಯರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಾತ್ವಿಕವಾದ ಶಾಂತಮನಸ್ಸು ಎಂಬ ಒಳಗಣ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದು ಶಾಶ್ವತವಾದದ್ದೂ ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದೂ ಆಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಭಕ್ತೆಯರಾದ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದು ಯಾವ ಭೀತಿಗೂ ಗಾಬರಿಪಡದೆ ಒಳ್ಳೇದನ್ನೇ ಮಾಡುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಹು ಕಾಲದ ಹಿಂದೆ ಜೀವಿಸಿದ್ದು ದೇವರನ್ನು ಅನುಸರಿಸುತ್ತಾ ಪರಿಶುದ್ಧರಾಗಿದ್ದ ಸ್ತ್ರೀಯರು ಇದೇ ರೀತಿಯಲ್ಲಿ ತಮ್ಮನ್ನು ಶೃಂಗರಿಸಿಕೊಂಡರು. ಅವರು ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಲೈ ಫಾಟ್ಲ್ಯಾ ಯೆಳಾರ್ ಪವಿತ್ರ್ ಜಿವನ್ ಕರಲ್ಲ್ಯಾ ಭಕ್ತಿನ್ ಚಲ್ತಲ್ಯಾ ಬಾಯ್ಕಾ ಮಾನ್ಸಾನಿ ದೆವಾಚೆರ್ ಬರೊಸೊ ಥವ್ನ್ ಮಾನುನ್ ಘೆವ್ನ್ ಚಲುನ್ ಅಸೆಚ್ ಅಪ್ನಾಕ್ನಿ ಬಿ ಶಿಂಗಾರ್ ಕರುನ್ ಘೆವ್ನ್ ಅಪ್ಲ್ಯಾ ಘವಾಕ್ನಿ ಖಾಲ್ತಿ ಹೊವ್ನ್ ಚಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:5
17 ತಿಳಿವುಗಳ ಹೋಲಿಕೆ  

ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.


ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.


ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.


ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”


ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.


ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.


ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು.


ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.


ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.


ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.


ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು