Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:7 - ಕನ್ನಡ ಸಮಕಾಲಿಕ ಅನುವಾದ

7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:7
20 ತಿಳಿವುಗಳ ಹೋಲಿಕೆ  

ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.


ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.


ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ.


“ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.


ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಪತಿಯರಲ್ಲಿ ಯಾರಾದರೂ ವಾಕ್ಯವನ್ನು ಸ್ವೀಕರಿಸದವರಾಗಿದ್ದರೂ ಪತ್ನಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು