Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:1 - ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಕ್ರಿಸ್ತ್ ಆಂಗಾ ಮಾಸಾನ್ ಹೊತ್ತ್ಯಾ ತನ್ನಾ ತೆನಿ ಕಸ್ಟ್ ಖಾಲ್ಯಾನ್ ತುಮಿಬಿ ತೆಚ್ಯಾ ಸಾರ್ಕೆಚ್ ಮನುನ್ ಯವ್ಜುನ್ ಘೆವ್ನ್ ತುಮ್ಕಾ ತುಮಿ ಘಟ್ಟ್ ಕರುನ್ಗೆವಾ, ಕಶ್ಯಾಕ್ ಮಟ್ಲ್ಯಾರ್, ಆಂಗಾ ಮಾಸಾನಿ ಕಸ್ಟ್ ಸೊಸ್ತಲೊ ಪಾಪಾತ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:1
17 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಮರಣ ಹೊಂದಿರುವ ಯಾರೇ ಆದರೂ ಪಾಪದಿಂದ ಮುಕ್ತರಾಗಿರುತ್ತಾರೆ.


ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.


ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:


ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ.


ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಆಜ್ಞೆಗಳನ್ನೂ ತೀರ್ಪುಗಳನ್ನೂ ಅನುಸರಿಸಬೇಕು,” ಎಂದು ಹೇಳಿದನು.


ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು