Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:10 - ಕನ್ನಡ ಸಮಕಾಲಿಕ ಅನುವಾದ

10 ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಉಲ್ಲೊ ಕಸ್ಟ್ ತುಮಿ ಸೊಸುನ್ ಹೊಲ್ಲ್ಯಾ ಮಾನಾ ಸಗ್ಳ್ಯಾ ಕುರ್ಪೆಚೊ ದೆವ್ ತೆನಿ ಕ್ರಿಸ್ತಾಚ್ಯಾ ವಾಂಗ್ಡಾ ಅಪ್ನಾಚ್ಯಾ ಅಂತ್ ನಸಲ್ಲ್ಯಾ ಮಹಿಮೆತ್ ವಾಟೊ ಘೆವ್ಕ್ ತುಮ್ಕಾ ಬಲ್ವುತಾ, ತೊ ಅಪ್ನಿಚ್ ತುಮ್ಕಾ ಪರಿಪುರ್ನ್ ಕರ್ತಾ ಅನಿ ಆಧಾರ್ ದಿತಾ, ಅನಿ ಬಳ್ ದಿತಾ ಘಟ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:10
39 ತಿಳಿವುಗಳ ಹೋಲಿಕೆ  

ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.


ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು.


ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ಸಹನೆಯನ್ನೂ ಉತ್ತೇಜನವನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವಂತೆ ನಿಮಗೆ ಒಂದೇ ಆತ್ಮವನ್ನು ಕೊಡಲಿ.


ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ನನ್ನ ಪ್ರಾಣವು ದುಃಖದಿಂದ ಬಲಹೀನವಾಗಿದೆ; ನಿಮ್ಮ ವಾಕ್ಯದಿಂದ ನನ್ನನ್ನು ಬಲಪಡಿಸಿರಿ.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು