Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:13 - ಕನ್ನಡ ಸಮಕಾಲಿಕ ಅನುವಾದ

13 ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ಹಾಗೆ ದೇವರಿಂದ ಆಯ್ಕೆಯಾದ ಬಾಬಿಲೋನಿನಲ್ಲಿರುವ ಸಭೆ ನಿಮಗೆ ವಂದನೆಗಳನ್ನು ತಿಳಿಸುತ್ತದೆ. ಅಂತೆಯೇ, ನನ್ನ ಮಗನಂತಿರುವ ಮಾರ್ಕನು ನಿಮ್ಮನ್ನು ವಂದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಾಬಿಲೋನಿನಲ್ಲಿರುವ ಸಭೆಯವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ನಿಮ್ಮನ್ನು ಆರಿಸಿಕೊಂಡಂತೆಯೇ ಆ ಜನರನ್ನೂ ಆರಿಸಿಕೊಳ್ಳಲಾಗಿದೆ. ಕ್ರಿಸ್ತನಲ್ಲಿ ನನ್ನ ಮಗನಾದ ಮಾರ್ಕನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಬಾಬಿಲೊನ್ ಮನ್ತಲ್ಲ್ಯಾ ಗಾಂವಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ತುಮ್ಚ್ಯಾ ವಾಂಗ್ಡಾಚ್ ಎಚುನ್ ಕಾಡಲೊ ತುಮ್ಕಾ ಇಚಾರುಲ್ಲಾ ಅನಿ ತಸೆಚ್ ವಿಶ್ವಾಸಾತ್ ಮಾಜ್ಯಾ ಲೆಕಾ ಸಾರ್ಕೊ ಹೊತ್ತೊ ಮಾರ್ಕ್ ಬಿ ಇಚಾರುಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:13
11 ತಿಳಿವುಗಳ ಹೋಲಿಕೆ  

ಅವನು ಇದನ್ನು ಗ್ರಹಿಸಿ, ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿ ಮರಿಯಳ ಮನೆಗೆ ಹೋದನು. ಅಲ್ಲಿ ಅನೇಕರು ಒಟ್ಟಾಗಿ ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.


ಬಾರ್ನಬ ಮತ್ತು ಸೌಲನು ತಮ್ಮ ಸೇವಾಕಾರ್ಯವನ್ನು ಮುಗಿಸಿ, ಮಾರ್ಕ ಎಂದು ಕರೆಯಲಾಗುತ್ತಿದ್ದ ಯೋಹಾನನನ್ನು ತಮ್ಮೊಂದಿಗೆ ಕರೆದುಕೊಂಡು ಯೆರೂಸಲೇಮಿನಿಂದ ಹೊರಟು ಹೋದರು.


ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


ಆಕೆಯ ಹಣೆಯ ಮೇಲೆ: “ಮಹಾ ಬಾಬಿಲೋನ್, ಜಾರ ಸ್ತ್ರೀಯರಿಗೂ ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!” ಎಂದು ನಿಗೂಢ ಹೆಸರು ಬರೆದಿತ್ತು.


ದೇವರಿಂದ ಆಯ್ಕೆಯಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ.


“ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”


ಬಾರ್ನಬನು ಮಾರ್ಕ ಎಂಬ ಹೆಸರಿನ ಯೋಹಾನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬಯಸಿದನು,


ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು,


ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ನನ್ನ ಜೊತೆಕೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ ಹಾಗೂ ಲೂಕ ನಿನ್ನನ್ನು ವಂದಿಸುತ್ತಾರೆ.


ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು