Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:3 - ಕನ್ನಡ ಸಮಕಾಲಿಕ ಅನುವಾದ

3 ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ನಿಮ್ಮ ವಶದಲ್ಲಿಟ್ಟಿರುವ ಸಭೆಗಳ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮ್ಚ್ಯಾ ಜವಾಬ್ದಾರಿತ್ ಹೊತ್ತ್ಯಾಚ್ಯಾ ಹಿಂಡಾಚ್ಯಾ ವೈರ್ ಅದಿಕಾರ್ ಚಲ್ವುನಕಾಸಿ ಖರೆ ತ್ಯಾ ಹಿಂಡಾಕ್ ತುಮಿ ಎಕ್ ಉದಾರ್ ಹೊವ್ನ್ ರಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:3
26 ತಿಳಿವುಗಳ ಹೋಲಿಕೆ  

ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು.


ಪ್ರಿಯರೇ, ನೀವು ನನ್ನನ್ನು ಅನುಸರಿಸುವವರಾಗಿರಿ. ನಮ್ಮ ಹಾಗೆ ಬಾಳುವ ಆದರ್ಶದ ಪ್ರಕಾರ ನಡೆದುಕೊಳ್ಳುವವರನ್ನು ಗಮನಿಸಿರಿ.


ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.


ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ


ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ಆದರೂ, ಕರ್ತ ದೇವರಲ್ಲಿ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀಯಿಲ್ಲದ ಪುರುಷನೂ ಇಲ್ಲ.


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ.


ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ಕೊಟ್ಟಿದ್ದೇನೆ.


ಹೀಗೆ ಮಕೆದೋನ್ಯ ಹಾಗೂ ಅಖಾಯದ ವಿಶ್ವಾಸಿಗಳೆಲ್ಲರಿಗೂ ನೀವು ಆದರ್ಶರಾದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು