Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:4 - ಕನ್ನಡ ಸಮಕಾಲಿಕ ಅನುವಾದ

4 ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮೊಟೊ ಕುರ್ಬುರ್ ದಿಲ್ಲ್ಯಾ ತನ್ನಾ ತೊ ತುಮಿ ಮಹಿಮೆನ್ ಭರಲೊ ಮುಕುಟ್ ಜೊಡುನ್ಗೆತ್ಯಾಸಿ, ತೆಜೊ ಪ್ರಜ್ವಳ್ ಕನ್ನಾಚ್ ಕಮ್ಮಿ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:4
22 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.


ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.


ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.


ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು