Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:8 - ಕನ್ನಡ ಸಮಕಾಲಿಕ ಅನುವಾದ

8 ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹುಶ್ಯಾರ್ಕಿನ್ ರಾವಾ ಅನಿ ಜಾಗೆ ರಾವಾ ! ದುಶ್ಮನ್ ಗಿರೊ ಘಜ್ನಿ ಘಾಲ್ತಲ್ಲ್ಯಾ ಸಿವಾಚ್ಯಾ ಬಾಸೆನ್ ಹಿಂಡುನ್ಗೆತ್ ಹಾಯ್, ಅನಿ ಪಿಂಜುನ್ ಖಾವ್ಕ್ ಬಿ ಗಾವ್ತಾ ಕಾಯ್ ಮನುನ್ ರಾಕುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:8
61 ತಿಳಿವುಗಳ ಹೋಲಿಕೆ  

ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.


ಆಗ ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.


ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ.


ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


“ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.


ಆದರೆ, ಅವನು ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಸ್ವಯಂನಿಯಂತ್ರವುಳ್ಳವನೂ ನ್ಯಾಯವಂತನೂ ಪರಿಶುದ್ಧನೂ ಶಿಸ್ತುಳ್ಳವನಾಗಿರಬೇಕು.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?


ಹಾಗೆಯೇ, ಯೌವನಸ್ಥರು ಆತ್ಮ ಸ್ವಶಿಸ್ತನ್ನು ಹೊಂದಿದವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸು.


ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು.


ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.


ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ, ನನ್ನೊಂದಿಗೆ ವ್ಯಾಜ್ಯವಾಡುವವರು ಯಾರು? ನಾವು ಪರಸ್ಪರ ಎದುರಿಸೋಣ! ನನ್ನ ಎದುರಾಳಿ ಯಾರು? ಅವನು ನನ್ನ ಸಮೀಪಕ್ಕೆ ಬರಲಿ.


ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.


ಸಿಂಹದ ಮರಿಗಳು ಬೇಟೆಗೋಸ್ಕರವೂ, ದೇವರಿಂದ ತಮ್ಮ ಆಹಾರವನ್ನು ಹುಡುಕುವುದಕ್ಕೋಸ್ಕರವೂ ಗರ್ಜಿಸುತ್ತವೆ.


ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


ಇದಲ್ಲದೆ ದೇವರ ವಾಕ್ಯವು ದೂಷಣೆಯಾಗದಂತೆ ಯೌವನ ಸ್ತ್ರೀಯರು ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ


ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.


ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.


ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ,


ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.


ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.


ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.


ಬೇಟೆ ಇಲ್ಲದಿದ್ದರೆ, ಅಡವಿಯಲ್ಲಿ ಸಿಂಹವು ಗರ್ಜಿಸುವುದೋ? ಏನಾದರೂ ಹಿಡಿಯದಿದ್ದರೆ, ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ?


ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.


ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.


ಆಗ ಸಂಸೋನನೂ, ಅವನ ತಂದೆತಾಯಿಗಳೂ ತಿಮ್ನಾತಿಗೆ ಹೋಗುತ್ತಿದ್ದರು. ಅವರು ತಿಮ್ನತಿನ ದ್ರಾಕ್ಷಿತೋಟಗಳ ಬಳಿಗೆ ಬಂದಾಗ, ಪ್ರಾಯದ ಸಿಂಹವು ಗರ್ಜಿಸುತ್ತಾ ಅವನ ಎದುರಿಗೆ ಬಂದಿತು.


ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.


ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.


ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು. ಸಿಂಹಗಳ ಮರಿಗಳ ಹಾಗೆ ಶಬ್ದಮಾಡುವರು.


ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.


ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.


ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”


ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.


ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.


ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು