Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:9 - ಕನ್ನಡ ಸಮಕಾಲಿಕ ಅನುವಾದ

9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಶ್ವಾಸದಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ನಿಮ್ಮ ಸಹ ವಿಶ್ವಾಸಿಗಳು ಜಗತ್ತಿನಲ್ಲೆಲ್ಲಾ ಇಂಥ ಹಿಂಸೆಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿದ್ದು ಅವನನ್ನು ಎದುರಿಸಿರಿ. ಯಾಕೆಂದರೆ ಲೋಕದಲ್ಲಿರುವ ನಿಮ್ಮ ಸಹೋದರ ಸಹೋದರಿಯರೆಲ್ಲರೂ ನಿಮಗಿರುವಂಥ ಬಾಧೆಗಳನ್ನು ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚ್ಯಾ ವಿಶ್ವಾಸಾತ್ ತುಮಿ ಘಟ್ ರಾವಾ, ಅನಿ ತೆಚ್ಯಾ ವಾಂಗ್ಡಾ ಘಟ್ ಕುಸ್ತಿ ಧರಾ ಕಶ್ಯಾಕ್ ಮಟ್ಲ್ಯಾರ್, ಹ್ಯಾ ಸಗ್ಳ್ಯಾ ಜಗಾತ್ ವಿಶ್ವಾಸಾತ್ ಹೊತ್ತೆ ಭಾವ್ ಭೆನಿಯಾನಿ ಅಸ್ಲಿಚ್ ಕಸ್ಟ್ ಸೊಸುಲ್ಲಾತ್ ಮನುನ್ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:9
24 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ಇವೆಲ್ಲವುಗಳೊಂದಿಗೆ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಈ ಗುರಾಣಿಯಿಂದಲೇ, ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.


ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.


ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ.


ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ.


ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.


ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.


ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು