Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:7 - ಕನ್ನಡ ಸಮಕಾಲಿಕ ಅನುವಾದ

7 ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಹೊವ್ನ್, ದೆವ್ ಕಸೊ ಉಜ್ವೊಡಾತ್ ಹಾಯ್ ತಸೆಚ್, ಅಮಿಬಿ ಉಜ್ವೊಡಾತ್ ಜಿವನ್ ಕರುಂಗೆತ್ ರ್‍ಹಾಲ್ಯಾರ್ ಎಕಾಮೆಕಾಕ್ ಎಕ್ವಟ್ಟಾನ್ ರ್‍ಹಾತಾಂವ್ ಅನಿ ದೆವಾಚ್ಯಾ ಲೆಕಾಚ್ಯಾ ಜೆಜುಚ್ಯಾ ರಗ್ತಾನ್ ಅಮ್ಚಿ ಸಗ್ಳಿ ಪಾಪಾ ಮಾಪ್ ಕರುನ್ ಹೊತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:7
34 ತಿಳಿವುಗಳ ಹೋಲಿಕೆ  

ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.


ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.


ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.


ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.


ಆತ್ಮ, ಜಲ, ರಕ್ತ ಎಂಬ ಮೂರು ಸಾಕ್ಷಿಗಳು ಇವೆ. ಇವು ಕೊಡುವ ಸಾಕ್ಷಿ ಒಂದೇ ಆಗಿರುತ್ತದೆ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ನನ್ನ ಮಕ್ಕಳು ಸತ್ಯವನ್ನು ಅನುಸರಿಸಿ ಬಾಳುತ್ತಿದ್ದಾರೆಂದು ಕೇಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.


ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.


ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.


ಒಪ್ಪಂದ ಮಾಡಿಕೊಳ್ಳದ ಹೊರತು, ಇಬ್ಬರು ಜೊತೆಯಾಗಿ ನಡೆಯಲು ಸಾಧ್ಯವೋ?


ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.


ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.


ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.


ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು