Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:9 - ಕನ್ನಡ ಸಮಕಾಲಿಕ ಅನುವಾದ

9 ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ, ಅಮಿ ತೆಚ್ಯಾಕ್ಡೆ ಸಗ್ಳಿ ಪಾಪಾ ಸಾಂಗುನ್ ಘೆಟ್ಲಾಂವ್ ತರ್ ತೊ ಅಪ್ನಾಚಿ ಗೊಸ್ಟ್ ಸಂಬಾಳ್ತಾ ಅನಿ ಸಮಾ ಹೊತ್ತೆ ಕರ್ತಾ. ತೊ ಅಮ್ಚಿ ಪಾಪಾ ಮಾಪ್ ಕರ್ತಾ, ಅನಿ ಅಮ್ಚ್ಯಾ ಸಗ್ಳ್ಯಾ ಚುಕಾನಿತ್ನಾ ಅಮ್ಕಾ ನಿತಳ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:9
37 ತಿಳಿವುಗಳ ಹೋಲಿಕೆ  

ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ವಿಶ್ವಾಸವಿಟ್ಟವರಲ್ಲಿ ಅನೇಕರು ಅಲ್ಲಿಗೆ ಬಂದು ತಮ್ಮ ಕೃತ್ಯಗಳನ್ನು ಅರಿಕೆಮಾಡಿದರು.


ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು. ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ,


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.


ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,


ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.


ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


“ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.


ಆದರೆ ಪೇತ್ರನು ಅಲ್ಲಗಳೆದು, “ಅಮ್ಮಾ, ನಾನು ಯೇಸುವನ್ನು ಅರಿಯೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು