Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:12 - ಕನ್ನಡ ಸಮಕಾಲಿಕ ಅನುವಾದ

12 ಪ್ರಿಯ ಮಕ್ಕಳೇ, ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರಿಯರಾದ ಮಕ್ಕಳೇ, ಕ್ರಿಸ್ತನ ಹೆಸರಿನ ನಿವಿುತ್ತ ನಿಮ್ಮ ಪಾಪಗಳು ಕ್ಷವಿುಸಲ್ಪಟ್ಟಿರುವದರಿಂದ ನಿಮಗೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರಿಯ ಮಕ್ಕಳೇ, ನಿಮ್ಮ ಪಾಪಗಳು ಕ್ರಿಸ್ತನ ಮೂಲಕ ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾಜ್ಯಾ ಪೊರಾನು, ಕ್ರಿಸ್ತಾಚ್ಯಾ ನಾವಾ ವೈನಾ ತುಮ್ಚ್ಯಾ ಪಾಪಾಂಚಿ ಮಾಪಿ ಗಾವ್ಲಾ, ತೆಚ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:12
22 ತಿಳಿವುಗಳ ಹೋಲಿಕೆ  

ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು.


ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.


ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.


ನೀವು ಸತ್ಯವನ್ನು ತಿಳಿಯದವರೆಂದು ನಾನು ಭಾವಿಸುತ್ತಿಲ್ಲ, ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಬರುವುದಿಲ್ಲ ಎಂಬುವುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ. ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು