1 ಯೋಹಾನನು 2:14 - ಕನ್ನಡ ಸಮಕಾಲಿಕ ಅನುವಾದ14 ಮಕ್ಕಳೇ, ನೀವು ತಂದೆಯನ್ನು ತಿಳಿದುಕೊಂಡಿರುವುದರಿಂದ ನಿಮಗೆ ಬರೆಯುತ್ತೇನೆ. ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಬಲ ಹೊಂದಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿರುವದರಿಂದಲೂ ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮಕ್ಕಳೇ, ನೀವು ತಂದೆಯನ್ನು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಬಲಶಾಲಿಗಳಾಗಿರುವುದರಿಂದ, ದೇವರ ವಾಕ್ಯವು ನಿಮ್ಮಲ್ಲಿ ನೆಲಸಿರುವುದರಿಂದ ಮತ್ತು ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಬಾಬಾನು, ಆರಂಬಾಕ್ನಾ ಹೊತ್ತ್ಯಾಕ್ ತುಮಿ ಒಳ್ಕುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ದಾಂಡ್ಗ್ಯಾ ಲೊಕಾನು, ತುಮಿ ಗಟ್ಟ್ ಹಾಸಿ ದೆವಾಚಿ ಗೊಸ್ಟ್ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ಸಾಟ್ನಿ ಅನಿ ತುಮಿ ವಾಯ್ಟಾಕ್ ಹರ್‍ವುನ್ ಟಾಕಲ್ಲ್ಯಾ ಸಾಟ್ನಿ ಮಿಯಾ ತುಮ್ಕಾ ಲಿವ್ಲಾ. ಅಧ್ಯಾಯವನ್ನು ನೋಡಿ |