1 ಯೋಹಾನನು 2:19 - ಕನ್ನಡ ಸಮಕಾಲಿಕ ಅನುವಾದ19 ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಹಿ ಮಾನ್ಸಾ ಖರೆಚ್ಬಿ ಅಮ್ಚ್ಯಾ ಪಕ್ಷಾಚಿ ನ್ಹಯ್, ತಸೆಹೊವ್ನ್ ತೆನಿ ಅಮ್ಕಾ ಸೊಡುನ್ ಗೆಲ್ಯಾತ್, ತೆನಿ ಅಮ್ಚ್ಯಾ ವಾಂಗ್ಡಾ ರ್‍ಹಾವ್ಚೆ ಹೊತ್ತೆ. ಹೆಚ್ಯಾ ವೈನಾ ತೆನಿ ಖರೆಚ್ಬಿ ಅಮ್ಚ್ಯಾ ವಾಂಗುಡ್ಚಿ ಲೊಕಾ ನ್ಹಯ್ ಮನುನ್ ದಿಸುನ್ ಯೆತಾ. ಅಧ್ಯಾಯವನ್ನು ನೋಡಿ |