Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ಎಲ್ಲರೂ ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ತುಮಿ ಕ್ರಿಸ್ತಾಚ್ಯಾ ವೈನಾ ವೊತಲ್ಲ್ಯಾ ಪವಿತ್ರ್ ಆತ್ಮ್ಯಾಕ್ ಘೆಟ್ಲ್ಯಾಸಿ ಅನಿ ತಸೆ ಹೊವ್ನ್ ತುಮ್ಕಾ ಖರೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:20
28 ತಿಳಿವುಗಳ ಹೋಲಿಕೆ  

ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.


ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.


ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”


ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.


ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.


ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.


ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.


ನನ್ನ ದೇವರೇ, ನಾನು ನಿಮ್ಮನ್ನು ಸ್ತುತಿಸುವೆನು. ನಿಮ್ಮ ನಂಬಿಗಸ್ತಿಕೆಗಾಗಿ ವೀಣೆಯಿಂದ ಕೊಂಡಾಡುವೆನು. ಇಸ್ರಾಯೇಲರ ಪರಿಶುದ್ಧರೇ, ಕಿನ್ನರಿಯಿಂದ ನಿಮ್ಮನ್ನು ಸ್ತುತಿಸುವೆನು.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’ ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.”


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು.


ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.


“ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.


ಏಕೆಂದರೆ ನಾನೇ ನಿನ್ನ ಯೆಹೋವ ದೇವರೂ ನಿನ್ನ ದೇವರಾದ ಇಸ್ರಾಯೇಲಿನ ಪರಿಶುದ್ಧನೂ, ನಿನ್ನ ರಕ್ಷಕನೂ ಆಗಿದ್ದೇನೆ. ಈಜಿಪ್ಟನ್ನು ನಿನ್ನ ವಿಮೋಚನೆಗೂ, ಇಥಿಯೋಪಿಯ ಮತ್ತು ಸೆಬಾ ಸೀಮೆಗಳನ್ನು ನಿನಗೋಸ್ಕರ ಕೊಟ್ಟಿದ್ದೇನೆ.


ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.


ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು