Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:21 - ಕನ್ನಡ ಸಮಕಾಲಿಕ ಅನುವಾದ

21 ನೀವು ಸತ್ಯವನ್ನು ತಿಳಿಯದವರೆಂದು ನಾನು ಭಾವಿಸುತ್ತಿಲ್ಲ, ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಬರುವುದಿಲ್ಲ ಎಂಬುವುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ, ನೀವು ಸತ್ಯವನ್ನು ಅರಿತವರು; ಸತ್ಯದಿಂದ ಸುಳ್ಳು ಜನಿಸದೆಂಬುದನ್ನು ತಿಳಿದವರು. ಆದುದರಿಂದ ನಾನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಸತ್ಯವನ್ನು ತಿಳಿಯದವರೆಂಬ ಭಾವನೆಯಿಂದಲ್ಲ, ನೀವು ಅದನ್ನು ತಿಳಿದಿರುವದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವದಿಲ್ಲವೆಂಬದನ್ನು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ನಿಮಗೆ ಏಕೆ ಬರೆಯಬೇಕು? ನೀವು ಸತ್ಯವನ್ನು ತಿಳಿದಿಲ್ಲವೆಂದು ನಾನು ಬರೆಯಬೇಕೇ? ಇಲ್ಲ! ನೀವು ಸತ್ಯವನ್ನು ತಿಳಿದಿರುವುದರಿಂದ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಸತ್ಯದಿಂದ ಯಾವ ಸುಳ್ಳೂ ಬರುವುದಿಲ್ಲ ಎಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಿಯಾ ತುಮ್ಚ್ಯಾ ಸಾಟ್ನಿ ಕಶ್ಯಾಕ್ ಲಿವ್ಚೆ? ನಾತರ್ ತುಮಿ ಖರ್ಯಾಕ್ ವಳ್ಕುಕ್ ನಾಸಿ ಮನುನ್ ಲಿವ್ಚೆ ಕಾಯ್? ನಾ! ತುಮಿ ಖರೆ ವಳ್ಕುನ್ ಘೆಟ್ಲ್ಯಾಸಿ ಮಟಲ್ಲ್ಯಾ ಸಾಟ್ನಿ ನ್ಹಯ್, ತೆ ತುಮಿ ಕಳ್ವುನ್ ಘೆಟಲ್ಲ್ಯಾ ವೈನಾ ಖರ್ಯಾತ್ನಾ ಕನ್ನಾಬಿ ಝುಟೆ ಯೆಯ್ನಾ ಮನ್ತಲೆ ತುಮ್ಕಾ ಕಳಲ್ಲೆ ಹಾಯ್. ತಸೆ ಮನುನ್ ಮಿಯಾ ಹಿ ಚಿಟಿ ಲಿವ್ಕಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:21
9 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.


ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.


ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ದೇವರ ಸಮಕ್ಷಮದಲ್ಲಿ ನಾವು ನಮ್ಮ ಹೃದಯವನ್ನು ವಿಶ್ರಾಂತಿಗೊಳಿಸಿರುವುದರಿಂದ ನಾವು ಸತ್ಯಕ್ಕೆ ಸೇರಿದವರು ಎಂಬುದು ಇದರಿಂದಲೇ ನಮಗೆ ತಿಳಿಯುತ್ತದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು