1 ಯೋಹಾನನು 2:27 - ಕನ್ನಡ ಸಮಕಾಲಿಕ ಅನುವಾದ27 ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಖರೆ ಕ್ರಿಸ್ತಾನ್ ತುಮ್ಚ್ಯಾ ವರ್ತಿ ಅಪ್ನಾಚೊ ಪವಿತ್ರ್ ಆತ್ಮೊ ವೊತ್ಲ್ಯಾನಾಯ್ ತೆಚೊ ಪವಿತ್ರ್ ಆತ್ಮೊ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾ, ಶಿಕ್ವುತಲ್ಯಾಚಿ ತುಮ್ಕಾ ಗರಜ್ ನಾ, ತೊಚ್ ತುಮ್ಕಾ ಶಿಕ್ವುತಾ ಅನಿ ತೆಚೆ ಶಿಕಾಪ್ ಖರೆ, ಝುಟೆ ನ್ಹಯ್.ತೆನಿ ತುಮ್ಕಾ ಶಿಕ್ವಲ್ಲ್ಯಾ ಸಾರ್ಕೆ ತುಮಿ ಕ್ರಿಸ್ತಾಚ್ಯಾ ವಾಂಗ್ಡಾ ರ್‍ಹಾವಾ. ಅಧ್ಯಾಯವನ್ನು ನೋಡಿ |