Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:28 - ಕನ್ನಡ ಸಮಕಾಲಿಕ ಅನುವಾದ

28 ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾಜ್ಯಾ ಪ್ರೆಮಾಚ್ಯಾ ಪೊರಾನು, ಅತ್ತಾ ತುಮಿ ತೆಚ್ಯಾ ವಾಂಗ್ಡಾ ರ್‍ಹಾವ್ಕ್ ಜಾಯ್,ಅಸೆ ತೊ ದಿಸ್ತಲ್ಲ್ಯಾ ದಿಸಾ ತೆಚ್ಯಾಕ್ನಾ ಲಜುನ್ ಧುರ್ ಜಾತಲ್ಯಾ ಬದ್ಲಾಕ್ ವಿಶ್ವಾಸಾನ್ ತೆಚೆಕ್ಡೆ ಜಾವ್ಕ್ ಪಾವ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:28
29 ತಿಳಿವುಗಳ ಹೋಲಿಕೆ  

ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.


ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸದಿದ್ದರೆ ದೇವರ ಮುಂದೆ ಆತ್ಮವಿಶ್ವಾಸ ನಮಗಿರುವುದು.


ನಿಮಗೆ ಜೀವವಾಗಿರುವ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ, ನೀವು ಸಹ ಅವರೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.


ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?


ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.


ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.


ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.


ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.


“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.


“ಮನುಷ್ಯಪುತ್ರನಾದ ನನ್ನ ಪ್ರತ್ಯಕ್ಷತೆಯ ದಿನದಲ್ಲಿಯೂ ಹಾಗೆ ಇರುವುದು.


ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು