Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:2 - ಕನ್ನಡ ಸಮಕಾಲಿಕ ಅನುವಾದ

2 ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾಜ್ಯಾ ಪ್ರಿತಿಚ್ಯಾ ವಾಂಗ್ಡಿಯಾನು, ಅತ್ತಾ ಅಮಿ ದೆವಾಚಿ ಪೊರಾ, ಅನಿ ಅಮಿ ಫಿಡೆ ಕಾಯ್ ಹೊತಾಂವ್ ಮನುನ್ ಅಮ್ಕಾ ಅಜುನ್ ಗೊತ್ತ್ ನಾ, ಖರೆ ಕ್ರಿಸ್ತ್ ಪರ್ತುನ್ ಯೆತಾನಾ ತೆ ಕಳ್ವುನ್ ಘೆತಾಂವ್, ಅಮಿ ತೆಚ್ಯಾ ಸಾರ್ಕೆ ಹೊತಾಂವ್, ಅಮಿ ತೆಚೊ ಖರೊ ರುಪ್ ಬಗ್ತಾವ್ ಮನ್ತಲೆ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:2
37 ತಿಳಿವುಗಳ ಹೋಲಿಕೆ  

ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


ನಿಮಗೆ ಜೀವವಾಗಿರುವ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ, ನೀವು ಸಹ ಅವರೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.


ದೇವರ ಮುಖವನ್ನು ಅವರು ಕಾಣುವರು. ಅವರ ಹಣೆಗಳ ಮೇಲೆ ದೇವರ ಹೆಸರು ಇರುವುದು.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.


ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”


ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.


ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.


ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, ಅವರು ದೇವರನ್ನು ಕಾಣುವರು.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


ನನ್ನ ಚರ್ಮವು ಬಿರಿದು ಹಾಳಾದ ಬಳಿಕವೂ, ನಾನು ದೇಹದಾರಿಯಾಗಿಯೇ ದೇವರನ್ನು ನೋಡುವೆನು.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.


ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.


“ಮನುಷ್ಯಪುತ್ರನಾದ ನನ್ನ ಪ್ರತ್ಯಕ್ಷತೆಯ ದಿನದಲ್ಲಿಯೂ ಹಾಗೆ ಇರುವುದು.


ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ.


ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.


ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.


ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.


ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.


ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ. ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.


ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.


ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸದಿದ್ದರೆ ದೇವರ ಮುಂದೆ ಆತ್ಮವಿಶ್ವಾಸ ನಮಗಿರುವುದು.


ನಾನು ಅಂಥವರಿಗೆ ಉದಯಸೂಚಕ ತಾರೆಯನ್ನು ಅವರಿಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು