Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:22 - ಕನ್ನಡ ಸಮಕಾಲಿಕ ಅನುವಾದ

22 ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ಎಣಿಕೆಯಲ್ಲಿ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವವರಾಗಿರುವದರಿಂದ ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಮಿ ತೆಚಿ ಹುಕುಮಾ ಪಾಳುನ್ ತೆಚ್ಯಾ ಮನಾ ಸಾರ್ಕೆ ಚಲ್ಲ್ಯಾರ್, ಅಮಿ ಕಾಯ್ ಮಾಗ್ತಾಂವ್ ತೆ ತೊ ಅಮ್ಕಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:22
37 ತಿಳಿವುಗಳ ಹೋಲಿಕೆ  

ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.


ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.


ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.


ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.


ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.


ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ. ನಿನ್ನ ಮುಖವನ್ನು ದೇವರ ಕಡೆಗೆ ಎತ್ತುವೆ.


ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ.


ನಾವು ದೇವರ ಆಜ್ಞೆಗಳನ್ನು ಕೈಕೊಂಡು ನಡೆಯುವುದರಿಂದಲೇ ದೇವರನ್ನು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು