Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:23 - ಕನ್ನಡ ಸಮಕಾಲಿಕ ಅನುವಾದ

23 ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರ ಆಜ್ಞೆ ಯಾವದಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಕ್ರಿಸ್ತನು ನಮಗೆ ಅಪ್ಪಣೆ ಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ದೆವಾಚೊ ಹುಕುಮ್ ಕಾಯ್ ಮಟ್ಲ್ಯಾರ್, ಜೆಜು ಕ್ರಿಸ್ತಾಚ್ಯಾ ನಾವಾ ವರ್ತಿ ವಿಶ್ವಾಸ್ ಥವ್ಚೆ ತೆನಿ ಸಾಂಗಟಲ್ಲ್ಯಾ ಸರ್ಕೆ ಎಕಾಮೆಕಾಚೊ ಪ್ರೆಮ್ ಕರುಚೆ ಮನ್ತಲೊಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:23
24 ತಿಳಿವುಗಳ ಹೋಲಿಕೆ  

“ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದು ನನ್ನ ಆಜ್ಞೆಯಾಗಿದೆ.


ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.


ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.


ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವುದು ಅವಶ್ಯವಿಲ್ಲ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ನೀವು ದೇವರಿಂದಲೇ ಉಪದೇಶ ಹೊಂದಿದ್ದೀರಿ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.


ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.


“ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.


ಯೇಸು ಪಸ್ಕಹಬ್ಬದಂದು ಯೆರೂಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ಅನೇಕರು ಕಂಡು ಅವರ ಹೆಸರಿನಲ್ಲಿ ನಂಬಿಕೆ ಇಟ್ಟರು.


ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.


ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ. ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.


ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.


ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು