1 ಯೋಹಾನನು 4:10 - ಕನ್ನಡ ಸಮಕಾಲಿಕ ಅನುವಾದ10 ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾವು ದೇವರನ್ನು ಪ್ರೀತಿಸಿದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟದರಲ್ಲಿಯೇ ಪ್ರೀತಿಯ ನಿಜ ಗುಣವು ತೋರಿ ಬರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರಿಗೆ ನಮ್ಮ ಮೇಲಿರುವ ಪ್ರೀತಿಯೇ ನಿಜವಾದ ಪ್ರೀತಿ. ನಮಗೆ ದೇವರ ಮೇಲಿರುವ ಪ್ರೀತಿ ನಿಜವಾದ ಪ್ರೀತಿಯಲ್ಲ. ನಮ್ಮ ಪಾಪ ನಿವಾರಣೆಗಾಗಿ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಮಿ ದೆವಾಚೊ ಪ್ರೆಮ್ ಕರುಕ್ನಾವ್, ಜಾಲ್ಯಾರ್ಬಿ ತೆನಿ ಅಮ್ಕಾ ಪ್ರೆಮ್ ಕರುನ್ ಅಮ್ಚ್ಯಾ ಪಾಪಾಚೆ ಪರಿಹಾರ್ ಹೊವ್ನ್ ಅಪ್ನಾಚ್ಯಾ ಲೆಕಾಕ್ ಬಲಿ ಕರುನ್ ದಿಲ್ಲ್ಯಾತ್. ತೆಚೊ ಖರೊ ಪ್ರೆಮ್ ಅಮ್ಕಾ ದಿಸುನ್ ಯೆತಾ. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.