Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:15 - ಕನ್ನಡ ಸಮಕಾಲಿಕ ಅನುವಾದ

15 ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೇಸು ದೇವರ ಮಗನಾಗಿದ್ದಾನೆಂದು ಯಾವನು ಒಪ್ಪಿಕೊಂಡು ಹೇಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯೇಸುವೇ ದೇವರ ಮಗನೆಂದು ನಾನು ನಂಬುತ್ತೇನೆ” ಎಂದು ಹೇಳುವವನಲ್ಲಿ ದೇವರು ನೆಲೆಸಿದ್ದಾನೆ ಮತ್ತು ಅವನು ದೇವರಲ್ಲಿ ನೆಲೆಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕೊನ್ ಜೆಜು ಕ್ರಿಸ್ತ್ ದೆವಾಚೊ ಲೆಕ್ ಮನುನ್ ಒಪುನ್ ಘೆತಾ, ತೆಂಚೆ ಭುತ್ತುರ್ ದೆವ್ ರ್‍ಹಾತಾ ಅನಿ ತೊ ದೆವಾಕ್ಡೆ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:15
15 ತಿಳಿವುಗಳ ಹೋಲಿಕೆ  

ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?


ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.


“ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.


ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.


ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.


ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.


ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.


ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.


ಮಗನನ್ನು ಅಲ್ಲಗಳೆಯುವವನು ತಂದೆಯನ್ನೂ ಅಲ್ಲಗಳೆಯುತ್ತಾನೆ. ಮಗನನ್ನು ಅಂಗೀಕರಿಸುವವನು ತಂದೆಯನ್ನೂ ಅಂಗೀಕರಿಸುತ್ತಾನೆ.


ನೀವಂತೂ ಯಾವುದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಹಾಗಿದ್ದರೆ, ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.


ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.


“ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು,” ಎಂದು ಫಿಲಿಪ್ಪನು ಹೇಳಿದನು. “ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ,” ಎಂದು ಕಂಚುಕಿಯು ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು