1 ಯೋಹಾನನು 4:4 - ಕನ್ನಡ ಸಮಕಾಲಿಕ ಅನುವಾದ4 ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪ್ರಿತಿಚ್ಯಾ ಪೊರಾನು, ತುಮಿ ದೆವಾಚಿ ಪೊರಾ, ಅನಿ ಝುಟ್ಯಾ ಪ್ರವಾದ್ಯಾಕ್ನಿ ಹಾರ್‍ವುಲ್ಯಾಸಿ ಕಶ್ಯಾಕ್ ಮಟ್ಲ್ಯಾರ್ ತುಮ್ಚ್ಯಾ ವಾಂಗ್ಡಾ ಹೊತ್ತೊ ದೆವ್ ಹ್ಯಾ ಜಗಾತ್ಲ್ಯಾ ಆತ್ಮ್ಯಾಕಿಂತಾ ಲೈ ತಾಕ್ತಿಚೊ. ಅಧ್ಯಾಯವನ್ನು ನೋಡಿ |