Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 4:6 - ಕನ್ನಡ ಸಮಕಾಲಿಕ ಅನುವಾದ

6 ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾವಂತೂ ದೇವರಿಂದ ಹುಟ್ಟಿದವರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಂದ ಹುಟ್ಟದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯವನ್ನು ಬೋಧಿಸುವ ಆತ್ಮ, ಅದು ಸುಳ್ಳನ್ನು ಬೋಧಿಸುವ ಆತ್ಮ ಎಂದು ಇದರಿಂದಲೇ ತಿಳುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಮಿ ದೆವಾಚಿ ಪೊರಾ, ಜೆ ಕೊನ್ ದೆವಾಕ್ ವಳಕ್ತಾ ತೊ ಅಮ್ಕಾಬಿ ವಳಕ್ತಾ, ಜೆ ಕೊನ್ ದೆವಾಚೊ ನ್ಹಯ್ ತೊ ಅಮ್ಕಾ ಕಾನ್ ದಿ ನಾ, ಹೆಚ್ಯಾ ವೈನಾ ಖರ್‍ಯಾ ಅನಿ ಝುಟ್ಯಾ ಆತ್ಮ್ಯಾಚ್ಯಾ ಮದ್ದಿ ಹೊತ್ತೊ ಪರಕ್ ಕಾಯ್ ಮನುನ್ ಅಮಿ ವಳಕ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 4:6
33 ತಿಳಿವುಗಳ ಹೋಲಿಕೆ  

ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ, ಆತ್ಮನ ವರಗಳನ್ನು ಹೊದಿದವನೆಂದಾಗಲಿ ಭಾವಿಸುವುದಾದರೆ, ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತದೇವರ ಆಜ್ಞೆಗಳೆಂದು ಸ್ಪಷ್ಟವಾಗಿ ತಿಳಿದುಕೊಳ್ಳಲಿ.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.


ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.


ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ.


ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”


ಆಗ ಅವರು, “ನಿನ್ನ ತಂದೆ ಎಲ್ಲಿ?” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ,” ಎಂದು ಉತ್ತರಕೊಟ್ಟರು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಪ್ರಿಯ ಸ್ನೇಹಿತರೇ, ನೀವಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.


ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.


ಪವಿತ್ರ ವೇದದಲ್ಲಿ ಬರೆದಿರುವಂತೆ, “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, ಕಾಣಲಾರದ ಕಣ್ಣನ್ನು ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, ಅದು ಇಂದಿನವರೆಗೂ ಹಾಗೆಯೇ ಇದೆ.”


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


ಯೇಸು ಅವರಿಗೆ, “ನೀವು ಕೆಳಗಿನವರು, ನಾನು ಮೇಲಿನವನು. ನೀವು ಈ ಲೋಕದವರು, ನಾನು ಈ ಲೋಕದವನಲ್ಲ.


ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


“ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು