1 ಯೋಹಾನನು 4:9 - ಕನ್ನಡ ಸಮಕಾಲಿಕ ಅನುವಾದ9 ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರು ತನ್ನ ಒಬ್ಬನೇ ಮಗನನ್ನು ನಾವು ಆತನ ಮೂಲಕ ಜೀವಿಸುವದಕ್ಕಾಗಿ ಲೋಕಕ್ಕೆ ಕಳುಹಿಸಿಕೊಟ್ಟದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ತನ್ನ ಒಬ್ಬನೇ ಮಗನ ಮೂಲಕ ನಮಗೆ ಜೀವವನ್ನು ಕೊಡುವುದಕ್ಕಾಗಿ ಆತನನ್ನು ಈ ಲೋಕಕ್ಕೆ ಕಳುಹಿಸಿದನು. ಹೀಗೆ ದೇವರು ತನ್ನ ಪ್ರೀತಿಯನ್ನು ನಮಗೆ ತೋರಿಸಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಮ್ಕಾ ಜಿವನ್ ದಿವ್ಚೆ ಮನುನ್ ಅಪ್ಲ್ಯಾ ಎಕ್ಲ್ಯಾಚ್ ಲೆಕಾಕ್ ಹ್ಯಾ ಜಗಾಕ್ ಧಾಡುನ್ ದಿವ್ನ್, ದೆವಾನ್ ಅಪ್ಲೊ ಪ್ರೆಮ್ ಅಮ್ಕಾ ದಾಕ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |