Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:14 - ಕನ್ನಡ ಸಮಕಾಲಿಕ ಅನುವಾದ

14 ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರ ಚಿತ್ತಾನುಸಾರ ಏನನ್ನು ಬೇಡಿಕೊಂಡರೂ ಅವರು ನಮ್ಮ ವಿಜ್ಞಾಪನೆಗೆ ಕಿವಿಗೊಡುತ್ತಾರೆಂಬ ಭರವಸೆ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮತ್ತು ನಾವು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಧೈರ್ಯವು ಆತನ ವಿಷಯವಾಗಿ ನಮಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವು ಯಾವ ಸಂದೇಹಗಳೂ ಇಲ್ಲದೆ ದೇವರ ಬಳಿಗೆ ಬರಲು ಸಾಧ್ಯವಿದೆ. ಇದರ ಅರ್ಥವೇನೆಂದರೆ (ದೇವರ ಚಿತ್ತಕ್ಕನುಸಾರವಾಗಿ) ನಮಗೆ ಬೇಕಾದವುಗಳಿಗಾಗಿ ದೇವರನ್ನು ಕೇಳಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮಿ ಕಸ್ಲೊಬಿ ಸಂಶೆವ್ ನಸ್ತಾನಾ ದೆವಾಚ್ಯಾ ಜಗೊಳ್ ಯೆವ್ಕ್ ಹೊತಾ, ಹೆಚೊ ಅರ್ಥ್ ಕಾಯ್ ಮಟ್ಲ್ಯಾರ್, ಅಮ್ಕಾ ಪಾಜೆ ಹೊಲ್ಲೆ ದೆವಾಕ್ಡೆ ಮಾಗುನ್ ಘೆಟ್ಲ್ಯಾರ್ ತೊ ಅಮ್ಚಿ ಮಾಗ್ನಿ ಆಯಿಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:14
26 ತಿಳಿವುಗಳ ಹೋಲಿಕೆ  

ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.


ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ, ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.


ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ಯೆಹೋವ ದೇವರು ಬಡವರ ಮೊರೆಗೆ ಕಿವಿಗೊಡುತ್ತಾರೆ. ಸೆರೆಯಲ್ಲಿರುವ ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ.


“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.


ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.


ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.


ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.


ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು