Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:18 - ಕನ್ನಡ ಸಮಕಾಲಿಕ ಅನುವಾದ

18 ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾಕ್ನಾ ಜಲ್ಮಲ್ಲೊ ಪಾಪ್ ಕರಿನಾ ಮನುನ್ ಅಮ್ಕಾ ಗೊತ್ತ್ ಹಾಯ್. ದೆವಾಕ್ನಾ ಜಲ್ಮಲ್ಲೊ ಅಪ್ನಾಕ್ ಅಪ್ನಿ ರಾಕುನ್ ಘೆತಾ, ಸೈತಾನ್ ತೆಕಾ ಆಪ್ಡುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:18
35 ತಿಳಿವುಗಳ ಹೋಲಿಕೆ  

ದೇವರಿಂದ ಹುಟ್ಟಿದವನು ಪಾಪವನ್ನು ಅಭ್ಯಾಸ ಮಾಡಲಾರನು, ಏಕೆಂದರೆ ದೇವರ ಬೀಜವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪ ಅಭ್ಯಾಸ ಮಾಡುವುದು ಅವನಿಗೆ ಅಸಾಧ್ಯ.


ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.


ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.


ದೇವರು ನೀತಿವಂತರಾಗಿದ್ದಾರೆಂಬುದು ನಿಮಗೆ ಗೊತ್ತಾಗಿದ್ದರೆ, ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನೂ ಅವರಿಂದ ಹುಟ್ಟಿದವನೆಂದು ನೀವು ತಿಳಿದಿರಬೇಕು.


“ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ಈಗ ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.


ನಿಮ್ಮ ವಾಕ್ಯವನ್ನು ಅನುಸರಿಸಬೇಕೆಂದು, ನಾನು ಪ್ರತಿಯೊಂದು ದುರ್ಮಾರ್ಗದಿಂದ ನನ್ನ ಹೆಜ್ಜೆಗಳನ್ನು ಹಿಂದೆಗೆದಿದ್ದೇನೆ.


ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.


ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.


“ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು, ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು. ದುಷ್ಟರು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,” ಎಂದು ತೀರ್ಮಾನಿಸಿಕೊಂಡೆನು.


ಕೆಡುಕನಾಗಿದ್ದ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ಅಲ್ಲ. ಅವನು ಯಾವ ಕಾರಣದಿಂದ ತಮ್ಮನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ ಅಲ್ಲವೇ?


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಅಂಥವರು ಅನ್ಯಾಯವನ್ನು ಮಾಡದೆ, ದೇವರ ಮಾರ್ಗಗಳಲ್ಲಿ ನಡೆದುಕೊಳ್ಳುವರು.


ಆದ್ದರಿಂದ ನಿಮ್ಮ ಮಾತು ಹೌದಾದರೆ ‘ಹೌದು’ ಇಲ್ಲವಾದರೆ ‘ಇಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಿನದು ಕೆಡುಕನಿಂದ ಬಂದದ್ದು.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೂ ಶುದ್ಧವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು