Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:15 - ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಹನ್ನಳು - ಸ್ವಾಮೀ, ಹಾಗಲ್ಲ; ನಾನು ಬಹುದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ಹೊಯ್ದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹನ್ನಳು “ಸ್ವಾಮೀ, ನಾನು ಯಾವುದೇ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿದಿಲ್ಲ. ನಾನು ಬಹುದುಃಖಿತಳು. ನಾನು ಯೆಹೋವನಲ್ಲಿ ನನ್ನ ಎಲ್ಲ ತೊಂದರೆಗಳನ್ನು ನಿವೇದಿಸಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:15
12 ತಿಳಿವುಗಳ ಹೋಲಿಕೆ  

ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.


ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.


ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.


“ಆದರೆ ಈಗ ನನ್ನ ಪ್ರಾಣವು ನನ್ನಲ್ಲಿಯೇ ಕರಗಿಹೋಗಿದೆ; ಸಂಕಟದ ದಿವಸಗಳು ನನ್ನನ್ನು ಬಿಗಿಹಿಡಿದಿವೆ.


ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.


ನಿನ್ನ ದಾಸಿಯನ್ನು ದುಷ್ಟಳೆಂದು ನೆನಸಬೇಡ. ನನ್ನ ಹೆಚ್ಚಾದ ಚಿಂತೆಯಿಂದಲೂ, ದುಃಖದಿಂದಲೂ ಈವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು,” ಎಂದಳು.


ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.


ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು