Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:16 - ಕನ್ನಡ ಸಮಕಾಲಿಕ ಅನುವಾದ

16 ನಿನ್ನ ದಾಸಿಯನ್ನು ದುಷ್ಟಳೆಂದು ನೆನಸಬೇಡ. ನನ್ನ ಹೆಚ್ಚಾದ ಚಿಂತೆಯಿಂದಲೂ, ದುಃಖದಿಂದಲೂ ಈವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡಿ. ಈವರೆಗೂ ನನ್ನ ಅತಿಯಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನನ್ನು ಅಯೋಗ್ಯ ಹೆಂಗಸೆಂದು ನೆನಸಬೇಡಿ. ನಾನು ಬಹು ದುಃಖಿತಳಾಗಿರುವುದರಿಂದ ಮತ್ತು ಹೆಚ್ಚು ನೊಂದಿರುವುದರಿಂದ ದೀರ್ಘಕಾಲ ಪ್ರಾರ್ಥನೆ ಮಾಡಿದೆ” ಎಂದು ಉತ್ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:16
11 ತಿಳಿವುಗಳ ಹೋಲಿಕೆ  

ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.


ನನ್ನ ಒಡೆಯನೇ, ದಯಮಾಡಿ ದುಷ್ಟನಾದ ನಾಬಾಲನ ಮೇಲೆ ಲಕ್ಷ್ಯವಿಡಬೇಡ. ಏಕೆಂದರೆ ಅವನ ಹೆಸರು ಹೇಗೋ, ಹಾಗೆಯೇ ಅವನು. ಅವನು ನಾಬಾಲನೆಂಬ ಹೆಸರುಳ್ಳವನು. ಬುದ್ಧಿಹೀನತೆ ಅವನಲ್ಲಿ ಇದೆ. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಸೇವಕರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ,


ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.


ಆಗ ಏಲಿಯು ಅವಳಿಗೆ, “ಸಮಾಧಾನದಿಂದ ಹೋಗು. ಇಸ್ರಾಯೇಲಿನ ದೇವರು, ಅವರಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯಂತೆ ನಿನಗೆ ಕೊಡಲಿ,” ಎಂದನು.


ನನ್ನನ್ನು ಆಲೈಸಿರಿ, ನನಗೆ ಉತ್ತರಕೊಡಿರಿ. ನಾನು ನನ್ನ ಚಿಂತೆಯಿಂದ ದುಃಖಿಸುತ್ತಾ ಬೇಸರವಾಗಿದ್ದೇನೆ.


ನೀವು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು. ಆ ಕಾರ್ಯವು ನಿಶ್ಚಯವಾಗಿ ಸತ್ಯವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು