Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:20 - ಕನ್ನಡ ಸಮಕಾಲಿಕ ಅನುವಾದ

20 ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹನ್ನಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಹನ್ನಳು ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅವಳು, “ಅವನ ಹೆಸರು ಸಮುವೇಲ, ಏಕೆಂದರೆ ನಾನು ಅವನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದ್ದೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:20
13 ತಿಳಿವುಗಳ ಹೋಲಿಕೆ  

ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


ಆ ಮಗುವು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಹೋದಳು. ಅವನು ಆಕೆಗೆ ಮಗನಾದನು. ಆಕೆಯು, “ನೀರಿನೊಳಗಿಂದ ಇವನನ್ನು ಎಳೆದೆ,” ಎಂದು ಹೇಳಿ ಅವನಿಗೆ “ಮೋಶೆ” ಎಂದು ಹೆಸರಿಟ್ಟಳು.


ಆಕೆಯು ಅವನಿಗೆ ಮಗನನ್ನು ಹೆತ್ತಾಗ, ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿಟ್ಟನು ಏಕೆಂದರೆ ಅವನು, “ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ,” ಎಂದನು.


ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.


ಅವನಿಗೆ, ನೋಹ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು.


ಆದಾಮನು ತಿರುಗಿ ತನ್ನ ಹೆಂಡತಿಯನ್ನು ಕೂಡಲು, ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ, ದೇವರು ನನಗೆ ಬೇರೆ ಸಂತಾನವನ್ನು ನೇಮಿಸಿದನು,” ಎಂದು ಆ ಮಗುವಿಗೆ, ಸೇತ್ ಎಂದು ಹೆಸರಿಟ್ಟಳು.


ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.


ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು.


ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.


ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು