Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 1:22 - ಕನ್ನಡ ಸಮಕಾಲಿಕ ಅನುವಾದ

22 ಹನ್ನಳು ಹೋಗದೆ ತನ್ನ ಗಂಡನಿಗೆ, “ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮಗನು ಮೊಲೆಬಿಡುವವರೆಗೂ ನಾನು ಬರುವದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುವೆನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 1:22
17 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ಮೋಶೆಯ ನಿಯಮದ ಪ್ರಕಾರ ಮರಿಯಳಿಗೆ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ, ಯೋಸೇಫನು ಮತ್ತು ಮರಿಯಳು ಶಿಶುವನ್ನು ಕರ್ತದೇವರಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತಂದರು.


ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.


ಬಾಲಕನಾದ ಸಮುಯೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಯೆಹೋವ ದೇವರ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದನು.


ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು. ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಯೆಹೋವ ದೇವರ ಸೇವೆ ಮಾಡುತ್ತಿದ್ದನು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


“ ‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.


ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.


ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.


ದಾವೀದನು ಆಕೀಷನಿಗೆ, “ನಿಶ್ಚಯವಾಗಿ ನಿನ್ನ ದಾಸನು ಮಾಡುವುದನ್ನು ನೀನೇ ತಿಳಿದುಕೊಳ್ಳುವಿ,” ಎಂದನು. ಆಕೀಷನು ದಾವೀದನಿಗೆ, “ಎಂದೆಂದಿಗೂ ನಾನು ನಿನ್ನನ್ನು ಕಾವಲುಗಾರನಾಗಿ ಮಾಡುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು